ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಈ ವಿದ್ಯಾರ್ಥಿಗಳಿಗೆ ಸಿಕ್ತು ಸರ್ಕಾರದಿಂದ ಭಾರಿ ಕೊಡುಗೆ

in ಕನ್ನಡ ಮಾಹಿತಿ 463 views

ಸರಕಾರಿ ಶಾಲೆ, ಕಾಲೇಜುಗಳೆಂದರೆ ಮೂಗು ಮುರಿಯುವವರೇ ಹೆಚ್ಚು. ಅದರಲ್ಲೂ ಇಂದಿನ ಸ್ಪಾರ್ಧಾತ್ಮಕ ಯುಗದಲ್ಲಿ ಪೋಷಕರೂ ಪ್ರತಿಷ್ಠೆಯ ಪ್ರಶ್ನೆಯಾಗಿ ಪರಿಗಣಿಸಿ ಮಕ್ಕಳನ್ನು ಖಾಸಗಿ ಶಾಲೆಗಳಲ್ಲಿ ಓದಿಸುವುದು ಸಾಮಾನ್ಯ ಎಂಬಂತಾಗಿದೆ. ಸರಕಾರಿ ಶಾಲೆಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸರ್ಕಾರಗಳು ಹಲವು ಯೋಜನೆಗಳನ್ನು ಜಾರಿಗೆ ತರುತ್ತಲೇ ಇದೆ. ಈ ಮಧ್ಯೆ ಸರಕಾರಿ ಶಾಲೆಯಲ್ಲಿ ಓದಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಟಾಪರ್ ಆಗಿರುವ ಇಬ್ಬರು ವಿದ್ಯಾರ್ಥಿಗಳು ಶಿಕ್ಷಣ ಸಚಿವರಿಂದ ಕಾರನ್ನು ಉಡುಗೊರೆಯಾಗಿ ಪಡೆಯುವ ಮೂಲಕ ದೇಶದ ಗಮನ ಸೆಳೆದಿದ್ದಾರೆ.ಹೌದು. ಆದರೆ ಇದು ನಡೆದದ್ದು ನಮ್ಮ ರಾಜ್ಯದಲ್ಲಲ್ಲ ಜಾರ್ಖಂಡ್ ನಲ್ಲಿ.ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಜಾರ್ಖಂಡ್ ಶಿಕ್ಷಣ ಸಚಿವ ಜಗರ್ನಾಥ್ ಮಹ್ತೊ ಆಲ್ಟೊ ಕಾರುಗಳನ್ನು ಗಿಫ್ಟ್ ಆಗಿ ನೀಡಿದ್ದಾರೆ. ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೆ ಪರಿಗಣಿಸಲಾಗುವ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಈ ಇಬ್ಬರು ಇದ್ಯಾರ್ಥಿಗಳಿಗೆ ನಿಜಕ್ಕೂ ಮರೆಯಲಾಗದ ಉಡುಗೊರೆ ನೀಡಿದೆ.

ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಫಲಿತಾಂಶದ ವೇಳೆ ಟಾಪರ್ ಗಳಿಗೆ ಕಾರ್ ಗಿಫ್ಟ್ ನೀಡುವುದಾಗಿ ಶಿಕ್ಷಣ ಸಚಿವ ಮಹ್ತೊ ಘೋಷಿಸಿದ್ದರು. ಕೊಟ್ಟ ಮಾತಿನಂತೆ ಇದೀಗ ಎಸ್ ಎಸ್.ಎಲ್ ಸಿಯಲ್ಲಿ ಟಾಪರ್ ಆಗಿರುವ ನೇತಾರ್ ರೆಸಿಡೆನ್ಸಿಯಲ್ ಸ್ಕೂಲ್ ನ ಮನೀಶ್ ಕುಮಾರ್ ಹಾಗೂ ಪಿಯುಸಿ ಟಾಪರ್ ಆಗಿರುವ ಎಸ್ ಆರ್ ಎಸ್ ಎಸ್ ಆರ್ ಸ್ಕೂಲ್ ನ ಅಮಿತ್ ಕುಮಾರ್ ಅವರಿಗೆ ಕಾರ್ ಗಿಫ್ಟ್ ನೀಡುವ ಮೂಲಕ ವಿನೂತನ ಕೊಡುಗೆ ನೀಡಿದ್ದಾರೆ.

ಶಿಕ್ಷಣ ಕ್ಷೇತ್ರದಲ್ಲಿ ಸರಕಾರಿ ಶಾಲೆಯ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹಾಗೂ ಶಿಕ್ಷಣದ ಕಡೆಗೆ ವಿದ್ಯಾರ್ಥಿಗಳು ಹೆಚ್ಚು ಆಸಕ್ತಿಯನ್ನು ಹೊಂದಬೇಕು ಎಂಬ ಕಾರಣಕ್ಕೆ ಕಾರ್ ಉಡುಗೊರೆ ನೀಡಲಾಗಿದೆ. ಮುಂದಿನ ವರ್ಷದಿಂದ 11ನೇ ತರಗತಿಯ ಟಾಪರ್‌ ಗಳಿಗೂ ಕಾರು ಗಿಫ್ಟ್ ನೀಡುವುದಾಗಿ ಭರವಸೆ ನೀಡಿದ್ದಾರೆ.

ಶ್ರೀ ಕಟೀಲು ದುರ್ಗಾಪರಮೇಶ್ವರಿ ದೇವಿ ಕೃಪೆಯಿಂದ ಈ ರಾಶಿಗಳಿಗೆ ಇಂದು , ಇಂದಿನ ನಿಮ್ಮ ರಾಶಿ ಭವಿಷ್ಯ ನಿಮ್ಮ ಸಮಸ್ಯೆ ಏನೇ ಇರಲಿ ಕರೆ ಮಾಡಿ9886027322. ದಕ್ಷಿಣ ಕನ್ನಡದ 108 ಜ್ಯೋತಿಷ್ಯ ತಂತ್ರಗಳಿಂದ ನಿಮ್ಮ ನಿಗೂಢ ಗುಪ್ತ ಸಮಸ್ಯೆಗಳಿಗೆ, ತಾಂಬೂಲ ಪ್ರಶ್ನೆ ಮತ್ತು ಆರೂಢ ಪ್ರಶ್ನೆಯಿಂದ ಕೇವಲ 11 ದಿನದಲ್ಲೇ ಶಾಶ್ವತ ಪರಿಹಾರ. ಪ್ರಧಾನ ಅರ್ಚಕರು ಹಾಗೂ ಪ್ರಧಾನ ತಾಂತ್ರಿಕರು ಶ್ರೀ ಸುಬ್ರಮಣ್ಯ ಆಚಾರ್ಯ ದೈವಶಕ್ತಿ ಜ್ಯೋತಿಷ್ಯರು . ಇನ್ನು ನಿಮ್ಮ ಜೀವನದಲ್ಲಿ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ಕೇರಳದ 18 ದೈವಿಕ ಪೂಜಾ ಶಕ್ತಿಗಳಿಂದ ಪರಿಹಾರ ಮಾಡಿಕೊಡುತ್ತಾರೆ .ನಿಮ್ಮಲ್ಲಿ ಸಮಸ್ಯೆಗಳಾದ ಮಾಟ ಮಂತ್ರ ನಿವಾರಣೆ, ಕೋರ್ಟ್ ವಿಚಾರ ,ಆಸ್ತಿ ವಿಚಾರ , ಹಣಕಾಸಿನ ಸಮಸ್ಯೆ, ಸತಿಪತಿ ಕಲಹ , ಅತ್ತೆ-ಸೊಸೆ ಕಲಹ , ಮಕ್ಕಳ ವಿದ್ಯಭ್ಯಾಸದಲ್ಲಿ ತೊಂದರೆ, ಪ್ರೇಮ ಸಂಬಂಧದಂತ ಯಾವುದೇ ಸಮಸ್ಯೆಗಳಿಗೆ ಇಂದೇ ಕರೆ ಮಾಡಿ. 9886027322 ಪರಿಹಾರ ಮಾಡಿಕೊಡುತ್ತಾರೆ.

Share this on...